ಸುಮ್ಮನೆ ಒಂದು ಕವನ ಬರ್ದಿದೀನಿ...ದಯವಿಟ್ಟು ತಪ್ಪು-ಒಪ್ಪು ತಿಳಿಸಿ....
ನಗೆಯಲ್ಲೆ ಅಪಹರಿಸಿ,ನಯನದಲೆ
ಉಪಚರಿಸಿ
ನಾಭಿಯಲು ಸಂಚರಿಸಿ,ನಡಿಗೆಯಲು
ಛಾಪಿರಿಸಿ
ಮಂಜಿನಂತೆ ಕರಗಿ
ಮರೆಯಾದ ಮೋಹಿತೆ,
ಪಂಜಿನಂತೆ ಉರಿದು
ಬರಿದಾದ ಸ್ನೇಹಿತೆ
ಕಣ್ಣಲ್ಲೆ ನಿನ್ನ
ಹಚ್ಚೆಯ ಬರೆದಿಹೆ
ಓ ಗಿಣಿಯೆ ಬಾ ಒಮ್ಮೆ,ನಿನಗೆ
ಕಾದಿಹೆ.
ಬಜ್ಜರಂದದ ಬೆಡಗಿ,ಚಿಕಣಿಯ
ಕಂಗಳ ಹುಡುಗಿ,
ಕಂಜರಿಯಂತಹ ನುಡಿಯು,ಕಾಡುವ
ಮೊಗ್ಗಿನ ಜಡೆಯು,
ಎಂದೆಂದೂ ನಿನ್ನ
ಜೊತೆಗೆ ಇರುವ ಹವಣಿಕೆ,
ಸರಿಸಿ ಹಳೆಯ ಪರದೆ,ಬಾ
ನೀ ಸನಿಹಕೆ,
ಬಣ್ಣಗಳು ಹಳೆನೆನಪು,ಇಂದೆಲ್ಲಾ
ಕರಿಬಿಳುಪು,
ಕಾಣದು ಕಣ್ಣಲಿ ಹೊಳಪು
,ಕರಗಿದೆ ಕನಸಿನ ಒನಪು,
ಆ ಕಾಲನಿಂದ ಬಿರಿದೆದೆಗೆ
ಮುತ್ತಿಗೆ.
ಸೋಲಿಸುವೆ ಅವನ ನೀ
ಬರುವಾ ಹೊತ್ತಿಗೆ.
-ಚಿನ್ಮಯ
(ಶಬ್ಧಾರ್ಥ : ಬಜ್ಜರ-ವಜ್ರ,ಕಂಜರಿ-ಸಣ್ಣ ತಮಟೆ,ನಾಭಿ-ಹೊಕ್ಕಳು,ಕೇಂದ್ರ ಸ್ಥಾನ,ಚಿಕಣಿ-ಚಿಕ್ಕ )